ಸನ್ಮಾರ್ಗ ವಾರ್ತೆ
ಕೇರಳ, ಮಾ. 21: ಕೊರೊನಾ ರೋಗಪೀಡಿತರಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದ ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ವಾಟ್ಸಪ್ ಗ್ರೂಪ್ ಅಡ್ಮಿನ್‍ಗಳಾದ ಶಿಬಿನ್ (24), ಆಶಿದ್ (24)ರನ್ನು ಕಲ್ಪಟ್ಟ ಪೊಲೀಸರು ಬಂಧಿಸಿದ್ದಾರೆ. ನಂತರ ಇಬ್ಬರನ್ನೂ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ. ಶುಕ್ರವಾರ ಫಹದ್ (25) ಎಂಬಾತನನ್ನು ಪೊಲೀಸರು ಸುಳ್ಳು ಸುದ್ದಿ ಹರಡಿದ ಪ್ರಕರಣದಲ್ಲಿ ಬಂಧಿಸಿದ್ದರು.
ಕಲ್ಪಟ್ಟದ ಖಾಸಗಿ ಆಸ್ಪತ್ರೆಯಲ್ಲಿರುವ ನಾಲ್ಕನೆ ಮೈಲು ನಿವಾಸಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ ಎಂದು ಪ್ರಚಾರ ಮಾಡಿರುವುದಕ್ಕೆ ಬಂಧನ ನಡೆದಿದೆ. ಸುಳ್ಳು ಸುದ್ದಿ ಪ್ರಸಾರ ಮಾಡಿದವರ ವಿರುದ್ಧ ಇನ್ನೂ ಕ್ರಮ ಜರಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.












