ಗೌರಿಬಿದನೂರಿನಲ್ಲಿ ಆರೋಗ್ಯ ತುರ್ತುಸ್ಥಿತಿ; ಒಂದೇ ಕುಟುಂಬದ ಐದು ಮಂದಿಯಲ್ಲಿ ಕೊರೋನಾ ಪಾಸಿಟಿವ್

0
986

ಸನ್ಮಾರ್ಗ ವಾರ್ತೆ

ಚಿಕ್ಕಬಳ್ಳಾಪುರ, ಮಾ. 28- ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂಬತ್ತು ಮಂದಿಗೆ ಕೊರೋನಾ ದೃಢಪಟ್ಟಿದ್ದು, ಜೆಲ್ಲೆಯ ಗೌರಿಬಿದನೂರಿನ ಒಂದೇ ಕುಟುಂಬದ ಐದು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಆರೋಗ್ಯ ತುರ್ತುಸ್ಥಿತಿ ಘೋಷಿಸಲಾಗಿದೆ.

ಒಂದೇ ಕುಟುಂಬದ 5 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಆಗಿದ್ದು ಈಗಾಗಲೇ ರಾಜ್ಯದಲ್ಲಿ 69 ಮಂದಿ ಕೊರೋನಾ ದೃಡಪಟ್ಟಿದೆ. ಅಲ್ಲದೆ ಗೌರಿಬಿದನೂರಿನ ಇನ್ನಿಬ್ಬರ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಅದರ ವರದಿ ಇವತ್ತು ಬರಲಿದೆ.

ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 239 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಈ ಹಿಂದೆ ಜಿಲ್ಲಾಧಿಕಾರಿ ಹೇಳಿದ್ದರು. ಫೆಬ್ರವರಿಯಿಂದ ಮಾರ್ಚ್ 26 ರವರೆಗೆ ಚಿಕ್ಕಬಳ್ಳಾಪುರಕ್ಕೆ 195 ಮಂದಿ ವಿದೇಶದಿಂದ ಬಂದಿದ್ದು ಅವರ ಜೊತೆ 44 ಜನ ಸಂಪರ್ಕ ಹೊಂದಿದ್ದರು ಮತ್ತು ಅವರೆಲ್ಲರ ಮೇಲೆ ನಿಗಾ ಇಡಲಾಗಿದೆ ಎಂದವರು ಹೇಳಿದ್ದರು.

ಗೌರಿಬಿದನೂರಿನಲ್ಲಿ 5 ಪಾಸಿಟಿವ್ ಪತ್ತೆಯಾದ ಬಳಿಕ ಎಲ್ಲ ವ್ಯಾಪಾರ ವಹಿವಾಟುಗಳಿಗೂ ಬ್ರೇಕ್ ಹಾಕಲಾಗಿದೆ. ಇಲ್ಲಿ ಒಂದು ಬಗೆಯ ಆತಂಕ ಮನೆಮಾಡಿದೆ ಎಂದು ವರದಿಯಾಗಿದೆ.