ಎಪ್ರಿಲ್‌ 20 ರ ಬಳಿಕ ಲಾಕ್ ಡೌನ್ ಸಡಿಲಿಕೆ: ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ: ಮುಖ್ಯಮಂತ್ರಿ

0
1182

ಸನ್ಮಾರ್ಗ ವಾರ್ತೆ

ಬೆಂಗಳೂರು, ಏಪ್ರಿಲ್ 18- ಏಪ್ರಿಲ್ 20ರ‌ ನಂತರ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೇ. ಮೂರರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಏಪ್ರಿಲ್ 20ರ‌ ನಂತರ ಕಂಟೋನ್ಮೆಂಟ್ ಝೋನ್ ಅಲ್ಲದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಆದರೆ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಲಾಕ್‌ ಡೌನ್‌ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಾಟಕ್ಕೆ ಅವಕಾಶ, ಕಟ್ಟಡ ನಿರ್ಮಾಣ ಕಾಮಗಾರಿ ಆರಂಭ ಅವಕಾಶ ನೀಡಲಾಗುವುದು. ಕಟ್ಟಡ ಕಾರ್ಮಿಕರು ಕೆಲಸ ನಿರ್ವಹಿಸಬಹುದು. ಕೈಗಾರಿಕೆಗಳೂ ಕೆಲಸ ಪ್ರಾರಂಭಿಸಬಹುದು. ಆದರೆ, ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಹೇಳಿದ್ದಾರೆ.

ಏಪ್ರಿಲ್ 20ರ ಬಳಿಕ ಐಟಿ ವಲಯದಲ್ಲಿ ಶೇ. 30 ರಷ್ಟು ಕೆಲಸಕ್ಕೆ ಅವಕಾಶ ನೀಡಲಾಗುವುದು. ಆದರೆ ಯಾವುದೇ ಹೊಸ ಪಾಸ್‌ ಇನ್ನು ಮುಂದೆ ವಿತರಿಸುವುದಿಲ್ಲ. ಕಚೇರಿಯ ಗುರುತಿನ ಚೀಟಿ ಇದ್ದರೆ ಸಾಕಾಗುತ್ತದೆ. ಕಾರಿನಲ್ಲಿ ಓಡಾಟಕ್ಕೆ ಪಾಸ್‌ ಬೇಕು ಎಂದು ಅವರು ವಿವರಿಸಿದ್ದಾರೆ.

ಅಂತರ್‌ ಜಿಲ್ಲೆಯ ಓಡಾಟಕ್ಕೆ ಅವಕಾಶವಿಲ್ಲ. ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದು. ಉಗುಳುವುದನ್ನು ನಿಷೇಧ ಮಾಡಲಾಗಿದೆ. ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಅವರು ಹೇಳಿದ್ದಾರೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.