ಸನ್ಮಾರ್ಗ ವಾರ್ತೆ
ಬಂಟ್ವಾಳ ಏಪ್ರಿಲ್ 26- ಇಲ್ಲಿನ 47 ವರ್ಷದ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು ಇಡೀ ರಾಜ್ಯದಲ್ಲಿ ಇವತ್ತು ದೃಢಪಟ್ಟ ಏಕೈಕ ಪಾಸಿಟಿವ್ ಪ್ರಕರಣ ಇದಾಗಿದೆ.
ಈ ಮಹಿಳೆ ಬಂಟ್ವಾಳದ 75 ವರ್ಷದ ವೃದ್ಧ ಮಹಿಳೆ ಚಿಕಿತ್ಸೆ ಪಡೆದಿದ್ದ ಪಡೀಲ್ ಸಮೀಪದ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದು, ಆ ವೃದ್ಧ ಮಹಿಳೆಯ ಸಂಪರ್ಕಕ್ಕೆ ಬಂದು ಇವರಿಗೂ ಕೊರೋನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಬಂಟ್ವಾಳದ ವೃದ್ಧ ಮಹಿಳೆ ಆ ಬಳಿಕ ಮೃತಪಟ್ಟಿದ್ದರು. ಆದರೆ ನಂತರ ಆ ನಂತರ ಈ ಖಾಸಗಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದ್ದು ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಈ ಮಹಿಳೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲಾ ಎಂಬ ಪ್ರದೇಶದವರಾಗಿದ್ದು ಆ ಪ್ರದೇಶವನ್ನು ಈಗ ಸೀಲ್ ಡೌನ್ ಮಾಡಲಾಗಿದೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು, ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 501ಕ್ಕೆ ಏರಿದ್ದು ಇಡೀ ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರಿಗೆ ಮಾತ್ರ ಇಂದು ಸೋಂಕು ಧೃಡಪಟ್ಟಿದೆ.
ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












