ಸನ್ಮಾರ್ಗ ವಾರ್ತೆ
ನವ ದೆಹಲಿ,ಮೇ.26: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,44,937ಕ್ಕೆ ತಲುಪಿದೆ. 24 ಗಂಟೆಗಳಲ್ಲಿ 6414 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, 3012 ಗುಣಮುಖರಾಗಿದ್ದಾರೆ ಹಾಗೂ 148 ಮಂದಿ ಸಾವನ್ನಪ್ಪಿದ್ದಾರೆ. 80 ಸಾವಿರಕ್ಕೂ ಹೆಚ್ಚು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಂಕಿಅಂಶಗಳು covid19india.org ಮತ್ತು ರಾಜ್ಯ ಸರ್ಕಾರಗಳಿಂದ ಪಡೆದ ಮಾಹಿತಿಯನ್ನು ಆಧರಿಸಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ 1,38,845 ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 77,103 ಮಂದಿ ಚಿಕಿತ್ಸೆಯಲ್ಲಿದ್ದಾರೆ, 57 720 ಮಂದಿ ಗುಣಮುಖರಾಗಿದ್ದಾರೆ ಮತ್ತು 4021 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.
ದೆಹಲಿಗೆ ಬರುವ ಪ್ರಯಾಣಿಕರು ಆರೋಗ್ಯ ಸೇತು ಆ್ಯಪ್ ಅನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಹಾಗೂ ವಿಮಾನಯಾನ ಸಚಿವಾಲಯವು ಖಾಸಗಿ ನಿರ್ವಾಹಕರಿಗೆ ವಿಮಾನಯಾನ ಸಂಸ್ಥೆಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ.












