ಬೆಂಗಳೂರಿನಲ್ಲಿ ಮತ್ತೆ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ಪ್ರತಿಭಟನೆ ಶುರು; ಬಂಧಿತರ ಬಿಡುಗಡೆಗೆ ಆಗ್ರಹ

0
1295

ಸನ್ಮಾರ್ಗ ವಾರ್ತೆ

ಬೆಂಗಳೂರು,ಜೂ.4: ಎರಡು ತಿಂಗಳಿಗೂ ಹೆಚ್ಚು ಸಮಯದ ಬಳಿಕ ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ಪುನಃ ಪ್ರತಿಭಟನೆ ಶುರುವಾಗಿದೆ. ದಿಲ್ಲಿಯಲ್ಲಿ ದೇಶದ ಇತರ ಕಡೆಗಳಲ್ಲಿ ಬಂಧಿಸಿದವರನ್ನು ಬಿಟ್ಟುಬಿಡಲು ಆಗ್ರಹಿಸಿ ಪ್ರತಿಭಟನೆ ಆರಂಭವಾಗಿದ್ದು, ಬುಧವಾರ ಬೆಂಗಳೂರಿನ ಮೌರ್ಯ ಸರ್ಕಲ್‍ನ ಗಾಂಧಿ ಪ್ರತಿಮೆ ಬಳಿ ಸಾಮಾಜಿಕ ಅಂತರ ಪಾಲಿಸಿಕೊಂಡು ಪ್ರತಿಭಟನಾ ಧರಣಿ ನಡೆಯಿತು.

ಪ್ರತಿಭಟನಾಕಾರರು ಮಾಸ್ಕ್ ಧರಿಸಿದ್ದರು. ಫೇಸ್ ಶೀಲ್ಡ್ ಕೂಡ ಹಾಕಿಕೊಂಡಿದ್ದರು. ಕೈಯಲ್ಲಿ ಪ್ಲಕಾರ್ಡ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಸಿಎಎ, ಎನ್‍ಆರ್‌ಸಿ ವಿರುದ್ಧ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗಿಯಾದವರನ್ನು ದೆಹಲಿ ಪೊಲೀಸರು ಗಲಭೆ ಕೃತ್ಯಗಳೊಂದಿಗೆ ನಂಟು ಹೊರಿಸಿ ಜಾಮಿಯಾ ಮಿಲ್ಲಿಯಾ, ಜೆಎನ್‍ಯು ವಿದ್ಯಾರ್ಥಿಗಳನ್ನು ಮತ್ತು ಇತರ ಸಾಮಾಜಿಕ ಕಾರ್ಯಕರ್ತರನ್ನು ಲಾಕ್‌ಡೌನ್ ಅವಧಿಯಲ್ಲಿ ಬಂಧಿಸಿದ್ದು, ಅವರನ್ನು ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ಮು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.