ಸನ್ಮಾರ್ಗ ವಾರ್ತೆ
ಮಂಗಳೂರು,ಜೂ.28: ಕೊರೋನ ವೈರಸ್’ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರು ಮೃತರಾಗಿದ್ದಾರೆ. ಮೃತರನ್ನು ಬಂಟ್ವಾಳದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್‌ನ ಇಡ್ಯಾ ನಿವಾಸಿ 31 ವರ್ಷದ ಯುವಕರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಸೋಂಕು ದೃಢಪಟ್ಟಿದ್ದ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವಕ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನೆಂದು ತಿಳಿದು ಬಂದಿದೆ. ಹಾಸನದಲ್ಲೂ ಇವತ್ತು ಒರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.
ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












