ವಿದ್ಯುತ್ ಬಿಲ್ ಪಾವತಿಗೆ ಸರ್ಕಾರ ಸಬ್ಸಿಡಿ ನೀಡಬೇಕು: ವೆಲ್ಫೇರ್ ಪಾರ್ಟಿ ಆಗ್ರಹ

0
866

ಸನ್ಮಾರ್ಗ ವಾರ್ತೆ

ಬೆಂಗಳೂರು, ಜುಲೈ 6: ಲಾಕ್‌ಡೌನ್ ಸಂದರ್ಭ ಮೂರು ತಿಂಗಳ ಬಿಲ್ ಕಟ್ಟಲು ರಾಜ್ಯ ಸರ್ಕಾರ ಕಾಲಾವಕಾಶ ನೀಡಿತ್ತು. ಲಾಕ್‌ಡೌನ್ ಸಡಿಲಿಕೆ ನಂತರ ಏಕಾಏಕಿ 4 ಪಟ್ಟು ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಅವೈಜ್ಞಾನಿಕವಾಗಿ ಬಿಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಲಾಕ್‌ಡೌನ್‌ನಿಂದ ದುಡಿಮೆಯೇ ಇಲ್ಲದೆ ಜನರು ಕಂಗಾಲಾಗಿರುವಾಗ ಸರಕಾರ ಕನಿಷ್ಠ ಪಕ್ಷ ಬಿಲ್ ಪಾವತಿಗೆ ಕೇರಳ ಸರ್ಕಾರದ ಮಾದರಿಯಲ್ಲಿ ಸಬ್ಸಿಡಿ ಕೊಡಬೇಕೆಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂಜಿನಿಯರ್ ಹಬೀಬುಲ್ಲಾ ಖಾನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ 19 ಸೋಂಕು ಮತ್ತು ಲಾಕ್ಡೌನ್ ನಿಂದ ಲಕ್ಷಾಂತರ ಜನ ಉದ್ಯೋಗ ಕಳೆದುಕೊಂಡಿದಾರೆ, ಇಂತಹ ಸಂದರ್ಭದಲ್ಲಿ ಸರ್ಕಾರ ಸಂಕಷ್ಟದಲ್ಲಿ ಇರುವ ಜನರಿಗೆ ಅನುಕೂಲವಾಗುವ ಬದಲು ಇನ್ನೆಷ್ಟು ಬರೆ ಎಳೆಯುವ ಕೆಲಸ ಮಾಡುತ್ತಿದೆಯೆಂದು ಅವರು ಆರೋಪಿಸಿದರು. ಸರ್ಕಾರ ಈ ಕೂಡಲೇ ವಿಧ್ಯುತ್ ಬಿಲ್ ಗೆ ಸಬ್ಸಿಡಿ ಘೋಷಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದೆ ವೇಳೆ ಮಾತನಾಡಿದ ಅವರು ಕೊರೋನಾವು ರಾಜ್ಯವನ್ನು ಸಂಪೂರ್ಣ ತಲ್ಲಣಗೊಳಿಸಿದೆ. ಜನರಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ನಿರ್ಲಕ್ಷತನವನ್ನು ತೋರಿಸುತ್ತಿದೆ. ಜನರ ಸಮಸ್ಯೆಗೆ ಗಮನವನ್ನೇ ಹರಿಸುತ್ತಿಲ್ಲ. ಮುಂದೆ ಪರಿಸ್ಥಿತಿ ಮತ್ತಷ್ಟು ಭೀಕರವಾಗಲಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಇದೆ. ಮನೆಯಲ್ಲೇ ಕ್ವಾರಂಟೈನ್ ಆಗಿ ಎನ್ನುತ್ತಾರೆ. ಹಾಸ್ಟಲ್, ಹೊಟೇಲ್ ವಶಕ್ಕೆ ತೆಗೆದುಕೊಳ್ಳುವಂತೆ ವೆಲ್ಫೇರ್ ಪಾರ್ಟಿ ಹೇಳಿತ್ತು. ಆದರೆ ಇಂದಿಗೂ ಏನೂ ಆಗಿಲ್ಲ ಎಂದರು. ಬೀದಿ ಬೀದಿಗಳಲ್ಲಿ ಜನ ಸಾಯುವ ಪರಿಸ್ಥಿತಿ ಎದುರಾಗಲಿದೆ. ಆ್ಯಂಬುಲೆನ್ಸ್, ಮೆಡಿಕಲ್ ಸಿಬ್ಬಂದಿಗಳ ಕೊರತೆಯಾಗಿದೆ. ಸರ್ಕಾರ ಸ್ಪೆಷಲ್ ರಿಕ್ರ್ಯೂಟ್ ಮೆಂಟ್ ಪ್ರಾರಂಭಿಸಲಿ. ನರ್ಸ್, ವೈದ್ಯರು, ಪೌರ ಕಾರ್ಮಿಕರನ್ನು ತೆಗೆದುಕೊಳ್ಳಲಿ. ಅಗತ್ಯವಾದಷ್ಟು ಸಿಬ್ಬಂದಿಯನ್ನು ತುರ್ತಾಗಿ ತೆಗೆದುಕೊಳ್ಳಲಿ ಎಂದು ಹಬೀಬುಲ್ಲಾ ಖಾನ್ ಒತ್ತಾಯಿಸಿದ್ದಾರೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.