ಸನ್ಮಾರ್ಗ ವಾರ್ತೆ
ಅಬುಧಾಬಿ, ಜುಲೈ: ಅಬುಧಾಬಿಯಲ್ಲಿ ಸುಮಾರು 35 ವರ್ಷಗಳಿಂದ ದುಡಿಯುತ್ತಿದ್ದ ಎಮಿರೇಟ್ಸ್ ಟ್ರಾನ್ಸ್ ಪೋರ್ಟ್ ಕಂಪೆನಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಗಳೂರಿನ ಕುದ್ರೋಳಿಯ ಹುಸೈನಬ್ಬರವರ ಮಗ ಮೂಲ್ಕಿ ಕಾರ್ನಾಡ್ ನಿವಾಸಿ ಮುಹಮ್ಮದ್ ಅಶ್ಫಾಕ್ (56) ಎಂಬವರು ಅಲ್ಪ ಕಾಲದ ಅನಾರೋಗ್ಯದಿಂದ ಇಲ್ಲಿನ ಶೇಖ್ ಖಲೀಫಾ ಮೆಡಿಕಲ್ ಸಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದಲೂ ನ್ಯುಮೋನಿಯಾದಿಂದಲೂ ಬಳಲುತ್ತಿದ್ದ ಮೃತರು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಮೃತ ಶರೀರವನ್ನು ಅಬುಧಾಬಿ ಬನಿಯಾಸ್ ದಫನ ಭೂಮಿಯಲ್ಲಿ ದಫನ ಮಾಡಲಾಯಿತು.
ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












