ಆಯುಷ್ಮಾನ್ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆ; ದ.ಕನ್ನಡ ಜಿಲ್ಲೆಯಲ್ಲಿ 240 ಸೇವಾ ಕೇಂದ್ರಗಳಲ್ಲಿ ಕಾರ್ಡ್ ಸೌಲಭ್ಯ

0
533

ಸನ್ಮಾರ್ಗ ವಾರ್ತೆ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದಾಗಿದೆ.

ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂಧರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ.

ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ರೂ.5.00 ಲಕ್ಷದ ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಎ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇಕಡಾ 30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.

ಸೌಲಭ್ಯ ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು, ಆರೋಗ್ಯ ಸಹಾಯವಾಣಿ 104ನ್ನು ಸಂಪರ್ಕಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ‌.

ಓದುಗರೇ, ಸನ್ಮಾರ್ಗ ಫೇಸ್‌ಬುಕ್‌ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.