ರಾಜ್ಯದಲ್ಲಿ ಮೂವರು ಕಾಂಗ್ರೆಸ್ ಶಾಸಕರಿಗೆ ಕೊರೋನ ಪಾಸಿಟಿವ್

0
602

ಸನ್ಮಾರ್ಗ ವಾರ್ತೆ

ಬೆಂಗಳೂರು,ಜು. 18: ರಾಜ್ಯದಲ್ಲಿ ಕಾಂಗ್ರೆಸ್ಸಿನ 2 ಶಾಸಕರು ಮತ್ತು 1 ಎಂಎಲ್‌ಸಿ ಸೇರಿದಂತೆ ಮೂವರು ಶಾಸಕರಿಗೆ ಕೊರೋನ ವೈರಸ್‌ಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಪಕ್ಷದ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

“ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಮತ್ತು ಬೀದರ್ ಜಿಲ್ಲೆಯ ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಮತ್ತು ಅವರ ಎಂಎಲ್‌ಸಿ ಸಹೋದರ ಚಂದ್ರಶೇಖರ್ ಪಾಟೀಲ್‌ರವರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಅವರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಪಕ್ಷದ ವಕ್ತಾರ ರವಿಗೌಡ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಯವರಿಗೆ ಕೊರೋನ ಸೋಂಕು ತಗುಲಿದ ನಂತರ ಅವರು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್‌ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.