ಸನ್ಮಾರ್ಗ ವಾರ್ತೆ
ಬೆಂಗಳೂರು: ಕಾವಲಭೈರಸಂದ್ರ ಮತ್ತು ಡಿ.ಜೆ ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದ ಘಟನೆ ವಿಷಾದಕರ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಅಡ್ವಕೇಟ್ ತಾಹಿರ್ ಹುಸೇನ್ ಖಂಡನೆ ವ್ಯಕ್ತಪಡಿಸಿದ್ದಾರೆ. ಜನರು ಶಾಂತಿ ಕಾಪಾಡಬೇಕು ಯಾವುದೇ ಕಾರಣಕ್ಕೂ ಕಾನೂನು ಕೈಗೆ ಇಟ್ಟುಕೊಳ್ಳಬಾರದು ಎಂದು ಮನವಿ ಮಾಡಿದರು.
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಪೋಸ್ಟ್ ಅತ್ಯಂತ ನಿಂದನೀಯ ಇದು ಸಮಾಜವನ್ನು ಒಡೆಯುವ ಹುನ್ನಾರ ಆಗಿದೆ. ಆರೋಪಿಗೆ ಕಾನೂನಿನ ಚೌಕಟ್ಟಿನೊಳಗೆ ಕಠಿಣ ಶಿಕ್ಷಯಾಗಬೇಕೆಂದು ಅವರು ಒತ್ತಾಯಿಸಿದರು. ಇಂತಹ ಸಂದರ್ಭದಲ್ಲಿ ಶಾಂತಿ ಕಾಪಾಡುವುದು ಅತ್ಯಂತ ಮುಖ್ಯವಾಗಿದೆ.
ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ.ಮತ್ತು ಈ ಗಲಭೆಯ ಸಿಐಡಿ ತನಿಖೆ ಆಗಬೇಕೆಂದು ಅವರು ಒತ್ತಾಯಿಸಿದರು.
ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












