ಸನ್ಮಾರ್ಗ ವಾರ್ತೆ
ಬಸವಕಲ್ಯಾಣ: ಕೇಂದ್ರ ಸರ್ಕಾರದ ನೀತಿಗಳಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದೆ. ಜಿಡಿಪಿ ನೆಲಕಚ್ಚಿದೆ, ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ, ದೇಶವು ಅಭಿವೃದ್ಧಿಯಲ್ಲಿ 10 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಜಾಹಿದ್ ಪಾಷಾ ಕುರೇಶಿ ಕಳವಳ ವ್ಯಕ್ತಪಡಿಸಿದರು.
ಈಗ ಸಾಲ ಅನಿಯಂತ್ರಿತವಾಗಿ ಜಾಸ್ತಿಯಾಗುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಅವರು ಹೇಳಿದರು.
ರಾಜ್ಯಗಳಿಗೆ ನೀವೇ ಸಾಲ ತೆಗೆದುಕೊಳ್ಳಿ ಎಂದು ಹೇಳುವುದು ವಿಪರ್ಯಾಸ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಸರ್ಕಾರ ರಾಜ್ಯದಲ್ಲಿದೆ.
ಸರಕು ಮತ್ತು ಸೇವಾ ತೆರಿಗೆ ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಅವರು ಹೇಳಿದರು.
ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












