ಲಾಕ್‌ಡೌನ್ ಸಂಕಷ್ಟ: ವಲಸೆ ಕಾರ್ಮಿಕರ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದ ಕೇಂದ್ರ ಸರಕಾರ

0
434

ಸನ್ಮಾರ್ಗ ವಾರ್ತೆ

ನವದೆಹಲಿ,ಸೆ.14: ಕೊರೋನಾ ವೈರಸ್(ಕೋವಿಡ್ -19) ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಏಕಾಏಕಿ ಮಾರ್ಚ್ 25 ರಿಂದ ಜಾರಿಗೆ ತರಲಾದ 68 ದಿನಗಳ ರಾಷ್ಟ್ರವ್ಯಾಪಿ ಲಾಕ್‌‌ಡೌನ್ ನಿರ್ಬಂಧದ ಸಮಯದಲ್ಲಿ ಪ್ರಾಣ ಕಳೆದುಕೊಂಡ ವಲಸೆ ಕಾರ್ಮಿಕರ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂಬುದಾಗಿ ಕೇಂದ್ರ ಸರಕಾರವು ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ.

ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗ ಕಳೆದುಕೊಂಡವರ ಬಗ್ಗೆಯೂ ಮಾಹಿತಿ ಲಭ್ಯವಿಲ್ಲ ಎಂದು ಕೇಂದ್ರವು ಹೇಳಿದೆ.

ಇದಲ್ಲದೇ, ದಾಖಲೆಗಳಿಲ್ಲದ ಕಾರಣದಿಂದಾಗಿ ಪ್ರಾಣ ಕಳೆದುಕೊಂಡ ವಲಸೆ ಕಾರ್ಮಿಕರಿಗೆ ಅಥವಾ ಉದ್ಯೋಗ ನಷ್ಟಹೊಂದಿದವರಿಗೆ ಪರಿಹಾರ ಧನ ನೀಡಲಾಗಿಲ್ಲ ಎಂದೂ ಕೇಂದ್ರ ಸರಕಾರವು ಸ್ಪಷ್ಟ ಪಡಿಸಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.