ಸನ್ಮಾರ್ಗ ವಾರ್ತೆ
ಬೆಂಗಳೂರು,ಸೆ.28: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೃಷಿಗೆ ಸಂಬಂಧಿತ ಕಾಯ್ದೆಗಳ ಜಾರಿ ವಿರೋಧಿಸಿ ವಿವಿಧ ರೈತ ಹಾಗೂ ಕನ್ನಡಪರ ಸಂಘಟನೆಗಳು ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿವೆ.
ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪಾಸ್ ಮಾಡಿರುವ ಕಾರ್ಮಿಕ ವಿರೋಧಿಯಾದ ಕಾರ್ಪೊರೇಟ್ ಬಂಡವಾಳ ಪರವಾದ ಕಾರ್ಮಿಕ ಕಾನೂನುಗಳ ತಿದ್ದುಪಡಿಯ ನಾಲ್ಕು ಸಂಹಿತೆಗಳಾದ ಕೈಗಾರಿಕಾ ಸಂಬಂಧಗಳ ಸಂಹಿತೆ, ವೃತ್ತಿ ಆಧಾರಿತ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಸಾಮಾಜಿಕ ಭದ್ರತಾ ಮಸೂದೆಗಳು ಹಾಗೂ ಈಗಾಗಲೇ ರೂಪಿಸಿರುವ ವೇತನ ಸಂಹಿತೆಯನ್ನೂ ವಾಪಸ್ ಪಡೆಯಬೇಕೆಂಬ ಕೂಗು ಈ ಸಂದರ್ಭದಲ್ಲಿ ಕೇಳಿ ಬಂತು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಿದೆ. ಬೆಂಗಳೂರು ನಗರದ ಟೌನ್ ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರಾದ ಅಡ್ವಕೇಟ್ ತಾಹಿರ್ ಹುಸೇನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ, ರಾಜ್ಯ ಮಾಧ್ಯಮ ಕಾರ್ಯದರ್ಶಿಯಾಗಿ ಅಜೀಜ್ ಜಾಗಿರ್ದಾರ್, ಬೆಂಗಳೂರು ಉತ್ತರ ಕ್ಷೇತ್ರದ ಅಧ್ಯಕ್ಷರಾದ ಆಸಿಫ್ ಮುಂತಾದವರು ಪಾಲ್ಗೊಂಡಿದ್ದರು.

ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












