ಹತ್ರಸ್ ಅತ್ಯಾಚಾರ ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ನಿಯೋಜನೆ

0
459

ಸನ್ಮಾರ್ಗ ವಾರ್ತೆ

ಲಕ್ನೊ,ಸೆ.30: ಉತ್ತರ ಪ್ರದೇಶ ಹತ್ರಸ್‍ನಲ್ಲಿ ದಲಿತ ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಘಟನೆಯ ತನಿಖೆಗೆ ರಾಜ್ಯದ ಗೃಹ ಕಾರ್ಯದರ್ಶಿ ಭಗ್‍ವಾನ್ ಸ್ವರೂಪ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ನಿಯೋಜಿಸಿದ್ದಾರೆ. ಪೊಲೀಸ್ ಅಧಿಕಾರಿಗಳಾದ ಡಿಐಜಿ ಚಂದ್ರ ಪ್ರಕಾಶ್, ಪಿಎಸಿ ಕಮಾಂಡೆಂಟ್ ಸೇನಾ ನಾಯಕ್ ಪೂನಂ ತನಿಖಾ ತಂಡದ ಇತರ ಸದಸ್ಯರು. ಏಳು ದಿವಸದೊಳಗೆ ವರದಿ ಸಲ್ಲಿಸುವಂತೆ ಸರಕಾರ ಸೂಚನೆ ನೀಡಿದೆ.

ಪ್ರಕರಣದ ವಿಚಾರಣೆಯನ್ನು ಧ್ರುತಗತಿ ಕೋರ್ಟಿಗೆ ಹಸ್ತಾಂತರಿಸಲು ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.
ಕುಟುಂಬ ನ್ಯಾಯಾಂಗ ತನಿಖೆಗೆ ಆಗ್ರಹಿಸಿದೆ.

ಸ್ಥಳೀಯ ಪೊಲೀಸರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ. ಸರಕಾರದ ಒತ್ತಡವಿದೆ ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ. ಕುಟುಂಬದ ವಿರೋಧವನ್ನು ಲೆಕ್ಕಿಸದೆ ಬಲವಂತದಿಂದ ಪೊಲೀಸರು ಸಂತ್ರಸ್ತೆಯ ಮೃತದೇಹ ಸಂಸ್ಕಾರ ಕಾರ್ಯ ಮಾಡಿ ಮುಗಿಸಿದ್ದಾರೆ. ಪೊಲೀಸರ ಈ ಕ್ರಮ ಹೆಚ್ಚು ವಿವಾದಕ್ಕೊಳಗಾಗಿದೆ. ಸೆಪ್ಟಂಬರ್ 14ರಂದು ನಾಲ್ವರು 19 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮಾಡಿ ನಾಲಗೆ ಕತ್ತರಿಸಿ ಹಾಕಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ಬಿಗಡಾಯಿಸಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಲಿಗೆ ಕರೆ ತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮಂಗಳವಾರ ಅಸುನೀಗಿದ್ದಳು.