ವಾಯು ಮಾಲಿನ್ಯವನ್ನು ತಡೆಗಟ್ಟಲು ಏನು ಕ್ರಮ ಕೈಗೊಂಡಿದ್ದೀರಿ?- ಯುಪಿ ಸರಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

0
612

ಸನ್ಮಾರ್ಗ ವಾರ್ತೆ

ಅಲಹಾಬಾದ್: ಉತ್ತರಪ್ರದೇಶದಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಏನು ಕ್ರಮ ಕೈಗೊಂಡಿದ್ದೀರಿ ಎಂಬುದಾಗಿ ರಾಜ್ಯ ಸರ್ಕಾರ ಮತ್ತು ಯುಪಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಲಹಾಬಾದ್ ಹೈಕೋರ್ಟ್ ಪ್ರಶ್ನಿಸಿದೆ.

ವಾತಾವರಣವನ್ನು ಸುಧಾರಿಸುವ ಉದ್ದೇಶಿತ ಕ್ರಮಗಳನ್ನು ಸೂಚಿಸಲು ಆರು ವಾರಗಳಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಹೈಕೋರ್ಟ್‌ನ ಲಕ್ನೋ ನ್ಯಾಯಪೀಠ ಸರಕಾರ ಮತ್ತು ಯುಪಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.

ಲಕ್ನೋ ನಿವಾಸಿ ರಾಧಿಕಾ ಸಿಂಗ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸೌರಭ್ ಲವಾನಿಯಾ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ನಡೆಸಿದೆ.