ಸನ್ಮಾರ್ಗ ವಾರ್ತೆ
ಕಾಪು: ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಅವರನ್ನು ಜಮಾಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲದ ವತಿಯಿಂದ ಅಭಿನಂದಿಸಲಾಯಿತು.
ಭಾರತ್ ಬಿಕ್ಕೋ ಕಂಪನಿ ಆವರಣದಲ್ಲಿರುವ ಕಾಪು ಪ್ರೆಸ್ ಕ್ಲಬ್ನ ಕಛೇರಿಗೆ ತೆರಳಿದ ಜಮಾಅತೆ ಇಸ್ಲಾಮೀ ಕಾಪು ವರ್ತುಲದ ಸಂಚಾಲಕ ಅನ್ವರ್ ಅಲಿ ಕಾಪು ನೇತೃತ್ವದಲ್ಲಿ ಅಭಿನಂದಿಸಿದ್ದು, ಈ ಸಂದರ್ಭದಲ್ಲಿ ಜಮಾಅತ್ ಕಾರ್ಯಕರ್ತರು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳ ಆಯ್ಕೆ
ಮಂಗಳವಾರ ಜರುಗಿದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಶಫೀ ಉಚ್ಚಿಲ,ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಕೋಶಾಧಿಕಾರಿಯಾಗಿ ಪುಂಡಲೀಕ ಮರಾಠ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಸುವರ್ಣ ಕಟಪಾಡಿ,ಕ್ರೀಡಾ ಕಾರ್ಯದರ್ಶಿಯಾಗಿ ವಾದಿರಾಜ್ ನಡಿಮನೆ, ಪ್ರೆಸ್ ಕ್ಲಬ್ ಕೋ, ಆರ್ಡಿನೇಟರ್ ಆಗಿ ಸಂತೋಷ್ ಕಾಪು ಅವರನ್ನು ಆಯ್ಕೆ ಮಾಡಲಾಯಿತು.












