ಸನ್ಮಾರ್ಗ ವಾರ್ತೆ
ಮುಂಬೈ, ಡಿ.5: 2018ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಗಢ ಜಿಲ್ಲೆಯ ಅಲಿಬಾಗ್ ನ್ಯಾಯಾಲಯದಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.
ಇಂಟಿರಿಯರ್ ಡಿಸೈನರ್ ಆಗಿದ್ದ ಅನ್ವಯ್ ನಾಯ್ಕ ಹಾಗೂ ಅವರ ತಾಯಿ ಕುಮುದ್‌ರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಡಿಯಲ್ಲಿ ಅರ್ನಬ್ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಶುಕ್ರವಾರ ಸ್ಥಳೀಯ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದರು.












