ನೀತಿ ಸಂಹಿತೆ ಉಲ್ಲಂಘನೆ; ಡಿಸಿಎಂ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗದ ಹಿಂದೇಟು: ವೆಲ್ಫೇರ್ ಪಾರ್ಟಿ

0
612

ಸನ್ಮಾರ್ಗ ವಾರ್ತೆ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣಾ ಪ್ರಚಾರದ ವೇಳೆ ಡಿಸಿಎಂ ಅಶ್ವಥ್ ನಾರಾಯಣ ಅವರು ನೀತಿಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ 15 ದಿನಳು ಕಳೆದರೂ ಕ್ರಮಕ್ಕೆ ಮುಂದಾಗದಿರುವುದು ಚುನಾವಣಾ ಆಯೋಗದ ಹಿಂದಿ ಟಿಕೆಟ್ ಸಾಕ್ಷಿಯಾಗಿದೆ. ಡಿಸಿಎಂ ಮೇಲೆ ಕ್ರಮಕೈಗೊಳ್ಳಲು ಆಯೋಗ ಹಿಂದೇಟು ಹಾಕುತ್ತಿರುವುದಾದರೂ ಯಾಕೆ..? ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೀರ್ ಹುಸೇನ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರ ವಿರುದ್ಧ ನೀಡಿದ ದೂರನ್ನು ಪರಿಗಣಿಸಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೆ ಪದೇಪದೇ ಉಪಮುಖ್ಯಮಂತ್ರಿ ಅಶ್ವಥ ನಾರಾಯಣ ಅವರು ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದರೂ ಅವರ ವಿರುದ್ಧ ಚಕಾರ ಎತ್ತುತ್ತಿಲ್ಲ.

ಉಪ ಮುಖ್ಯಮಂತ್ರಿಗಳ ವಿರುದ್ಧ ನಾವು ಡಿಸೆಂಬರ್ 3ರಂದು ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದೇವೆ. 15 ದಿನಗಳು ಕಳೆದರೂ ಇದುವರೆಗೂ ಚುನಾವಣಾ ಆಯೋಗ ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ವಿಪರ್ಯಾಸ. ಆಡಳಿತರೂಢ ಅಧಿಕಾರಸ್ಥರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಕೂಡಲೇ ಡಿಸಿಎಂ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಬೇಕು. ಇಲ್ಲವಾದಲ್ಲಿ ನ್ಯಾಯಾಲಯದ ಹೋಗಬೇಕಾಗುವುದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.