ಸನ್ಮಾರ್ಗ ವಾರ್ತೆ
ಬೆಂಗಳೂರು: ರೈತರ ಹೋರಾಟಕ್ಕೆ ಇನ್ನಷ್ಟು ಶಕ್ತಿ ತುಂಬುವುದಕ್ಕಾಗಿ ಹಾಗೂ ಕೃಷಿ ಸಂಬಂಧಿಸಿದ ಕಾಯಿದೆಗಳಿಗೆ ಮಾಡಲಾದ ತಿದ್ದುಪಡಿಗಳಿಂದಾಗಿ ರೈತರಿಗೆ, ಕೃಷಿ ಕ್ಷೇತ್ರಕ್ಕೆ ಆಗುವ ನಷ್ಟವನ್ನು ಕುರಿತಂತೆ ರಾಜ್ಯದಲ್ಲಿ ಜನ ಜಾಗೃತಿಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (WPI) ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಜನವರಿ 8ರಿಂದ ಜನವರಿ 15ರವರೆಗೆ ಒಂದು ವಾರದವರೆಗೆ ರಾಜ್ಯವ್ಯಾಪ್ತಿ ಜನ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ ಎಂಬುದಾಗಿ ಪಕ್ಷದ ರಾಜ್ಯಾದ್ಯಕ್ಷರಾದ ಅಡ್ವೋಕೆಟ್ ತಾಹೇರ್ ಹುಸೇನ್ ತಿಳಿಸಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವಾರ ಜನತೆಯೊಂದಿಗೆ ಚರ್ಚೆ, ಸಂವಾದ, ಹೋರಾಟ, ಪ್ರತಿಭಟನಾ ಮರೆವಣಿಗೆ ಜನಪ್ರತಿನಿಧಿಗಳ (ಎಂಪಿ ಎಂಎಲ್ಎ) ಕಾರ್ಯಾಲಯ/ ಮನೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು. ದೇಶ ಉಳಿಸುವ ಅನ್ನದಾತರ ಪರವಾದ ಹೊರಾಟಕ್ಕೆ ರಾಜ್ಯದ ಪ್ರಜ್ಞಾವಂತ ಜನತೆ, ವಿದ್ಯಾರ್ಥಿ, ಯುವಜನರು ಸೇರಿ ಪ್ರಗತಿಪರ ಸಂಘಟನೆಗಳು ಜೊತೆಯಾಗಬೇಕೆಂದು ಅವರು ಮನವಿ ಮಾಡಿದರು.
ದೇಶದ ಕೃಷಿ ವಲಯವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಇಂದು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ನಿಗದಿತ ಬೆಲೆ ಮತ್ತು ಮಾರುಕಟ್ಟೆ ಇಲ್ಲ. ನೀರಾವರಿ ಸೌಲಭ್ಯ, ಬೀತ್ತನೆ ಬೀಜ, ರಸಗೊಬ್ಬರ್, ವಿದ್ಯುತ್ ಪೂರೈಕೆ, ದಾಸ್ತಾನು ಕೊಠಡಿ, ಸಾಲ ಸೌಲಭ್ಯ, ಯಂತ್ರ-ತಂತ್ರಜ್ಞಾನಗಳ ಸೌಲಭ್ಯ ಸರಿಯಾಗಿ ಸಿಗದ ಪರಿಣಾಮ ರೈತರು ಆತ್ಮಹತ್ಯಗೆ ಶರಣಾಗುತ್ತಿದ್ದಾರೆ. ಅಸಂಖ್ಯಾತ ರೈತರು ಮತ್ತು ಕೃಷಿ ಕೂಲಿಕಾರರು ಕೃಷಿಯಿಂದ ದೂರವಾಗಿ ಹೊಟ್ಟೆಪಾಡಿಗಾಗಿ ಹಳ್ಳಿಯಿಂದ ನಗರಗಳಿಗೆ ವಲಸೆ ಹೋರಡುತ್ತಿದ್ದಾರೆ ಇದರ ಬಗ್ಗೆ ಗಮನ ಹರಿಸಬೇಕಾದ ನಮ್ಮ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನು ಮರೆತಿವೆ ಎಂದು ಅವರು ಟೀಕಿಸಿದರು.
ಬಿಜೆಪಿ ನೆತ್ರತ್ವದ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಮೂರುಮಹತ್ವದ ರೈತ ನತ್ತು ಜನವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಹೋರಟಿದೆ. ಈ ಕಾಯಿದೆಗಳು ಜಾರಿಯಾದರೆ ದೇಶದ ಕೃಷಿ ದಿವಾಳಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ತಿದ್ದುಪಡಿಗೆ ಒಳಗಾದ ಮೂರು ಕಾಯ್ದೆಗಳಾದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಕೃಷಿ ಉತ್ಪನ್ನ ಮತ್ತು ಸರಕು ಸೇವೆಗಳ ಮಾರಾಟ ಕಾಯಿದೆ(ಎಪಿಎಂಸಿ) ಮತ್ತು ವಿದ್ಯುಚ್ಚಕ್ತಿ ತಿದ್ದುಪಡಿ ಕಾಯಿದೆಗಳು ರೈತರಿಗೆ ಮಾರಕವಾಗಿ ಕೃಷಿಯನ್ನು ನಾಶಗೊಳಿಸಿ ಅಂಬಾನಿ, ಅದಾನಿ ಸೇರಿದಂತೆ ಇತರ ಕಾರ್ಪೋರೇಟ್ ಸಂಸ್ಥೆಗಳ ಮುಖ್ಯಸ್ಥರಿಗೆ ಕೃಷಿಯನ್ನು ಒಪ್ಪಿಸಲಿದೆ. ಕಾರ್ಪೋರೆಟ್ ಮತ್ತು ಬಂಡವಾಳ ಶಾಹಿಗಳ ಪರ ಇರುವ ರೈತ ಮತ್ತು ಜನ ವಿರೋಧಿ ಮೋದಿ ನೇತ್ರತ್ವದ ಭಾಜಪಾ ಸರ್ಕಾರ ಬಂಡವಾಳಶಾಹಿಗಳ ಹಿತ ಕಾಯಲು ಮುಂದಾಗಿದೆ. ಇಂತಹ ಸೂಕ್ಷ್ಮತೆಯನ್ನು ಅರಿತುಕೊಂಡು ನಾವುಗಳು ಅನ್ನಧಾತರ ಜೋತೆಗೆ ನಿಲ್ಲಬೇಕಿದೆ ಹಾಗೂ ರೈತ, ಕಾರ್ಮಿಕ, ದಲಿತ ,ಅಲ್ಪಸಂಖ್ಯಾತ, ಮಹಿಳಾ ಮತ್ತು ಜನವಿರೋಧಿ ಸರ್ಕಾರಕ್ಕೆ ತಕ್ಕುದಾದ ಪಾಠ ಕಲಿಸಿ ದೇಶವನ್ನು ಉಳಿಸಿಕೋಳ್ಳಬೇಕಿದೆ ಎಂದು ಅವರು ತಿಳಿಸಿದರು.
ರೈತರ ಜೋತೆಗೆ ನಿಲ್ಲುವುದೆಂದರೆ ದೇಶದ ಜೊತೆಗೆ ನಿಂತಂತೆ ನಾವು ರೈತರೊಂದಿಗೆ ನಿಲ್ಲೋಣ ದೆಹಲಿಯಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ ,ಮಹಾರಾಷ್ಟ್ರ, ಸೇರಿ ದೇಶದ ಇತರೆ ರಾಜ್ಯಗಳ ರೈತರು ಮಾಡಿತ್ತಿರುವ ಹೋರಾಟವು ದೇಶದ ಉಳಿವಿಗಾಗಿ ಮತ್ತು ಆಹಾರ ಭದ್ರತೆಗಾಗಿ ಮಾಡುತ್ತಿರುವ ಹೋರಾಟವಾಗಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಸಿರು ಸೇನೆ ಕಾರ್ಯಾಧ್ಯಕ್ಷರು ವೀರಸಂಗಯ್ಯ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್, ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ತಲತ್ ಯಾಸ್ಮಿನ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ತಾಜುದ್ದೀನ್ ಶರೀಫ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್ ಹಾಜರಿದ್ದರು.












