ಕೆಂಪುಕೋಟೆಯ ಮೇಲೆ ರೈತ ಧ್ವಜ; ಪೊಲೀಸರಿಂದ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ: ಟ್ರ್ಯಾಕ್ಟರ್ ಮಗುಚಿ ಓರ್ವ ರೈತನ ಸಾವು

0
1083

ಸನ್ಮಾರ್ಗ ವಾರ್ತೆ

ನವದೆಹಲಿ: ಕೇಂದ್ರ ಸರ್ಕಾರದ ಮೂರು ವಿವಾವಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರು ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪರೇಡ್‌‌ನೊಂದಿಗೆ ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಾರೆ.

ದೆಹಲಿಯಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರೈತರು-ಪೊಲೀಸರು ನಡುವೆ ಘರ್ಷಣೆ ನಡೆದು ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಹಾರ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು ಓರ್ವ ರೈತ ಅಸುನೀಗಿದ್ದಾರೆ, ರೈತರು ಮೃತ ರೈತನ ಶವವನ್ನಿರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ‌.

ದೆಹಲಿಯ ಮುಕಾರ್ಬಾ ಚೌಕ್ ನಲ್ಲಿ ಬ್ಯಾರಿಕೇಡ್ ಗಳನ್ನು ಮುರಿಯಲು ಯತ್ನಿಸಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ , ಜೊತೆಗೆ ಅಶ್ರುವಾಯು ಪ್ರಯೋಗಿಸಲಾಗಿದೆ. ಆದರೂ ಜಗ್ಗದ ರೈತರು ದೆಹಲಿಯ ಹೃದಯ ಭಾಗ ತಲುಪಿದ್ದು, ಈ ನಡುವೆ ಕೆಂಪು ಕೋಟೆಗೆ ನುಗ್ಗಿದ ಕೆಲವರು ರೈತ ಧ್ವಜ ಹಾರಿಸಿದ್ದಾರೆ.