ಕಳೆದ ಆರು ತಿಂಗಳಲ್ಲಿ ಚೀನಾ ಬಗ್ಗೆ ಪ್ರಧಾನಿ ಒಂದೇ ಒಂದು ಮಾತು ಹೇಳಿಲ್ಲ: ರಾಹುಲ್ ಗಾಂಧಿ ಟೀಕೆ

0
483

ಸನ್ಮಾರ್ಗ ವಾರ್ತೆ

ನೀಲಂಬೂರು(ಕೇರಳ): ಚೀನಾದೊಂದಿಗಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾದ ಸೈನ್ಯವು ದೇಶದೊಳಗೆ ಬಂದಾಗ ಅವರ 56 ಇಂಚಿನ ಎದೆಗೆ ಏನಾಯಿತು. ಕಳೆದ ಆರು ತಿಂಗಳಲ್ಲಿ ಚೀನಾ ಬಗ್ಗೆ ಪ್ರಧಾನಿ ಒಂದೇ ಒಂದು ಮಾತನ್ನು ಹೇಳಿಲ್ಲ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ ಮತ್ತು ನಾಶಪಡಿಸುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ. ಮೊದಲ ಬಾರಿಗೆ ಚೀನಾದ ಸೈನ್ಯವು ಭಾರತೀಯ ಭೂಪ್ರದೇಶದೊಳಗೆ ಕುಳಿತಿದೆ. ವಿಶ್ವದಲ್ಲಿ ಅತ್ಯುತ್ತಮ ಸ್ಥಿತಿಯಲ್ಲಿದ್ದ ನಮ್ಮ ಆರ್ಥಿಕತೆಯು ಕುಸಿದಿದೆ. ನಮ್ಮ ಯುವಕರಿಗೆ ಉದ್ಯೋಗಗಳು ಸಿಗುತ್ತಿಲ್ಲ. ಇದು ಆರ್‌ಎಸ್‌ಎಸ್‌ನ ಸಿದ್ಧಾಂತದ ಫಲಿತಾಂಶವಾಗಿದೆ ಎಂದವರು ಹೇಳಿದ್ದಾರೆ.

“ಖಂಡಿತವಾಗಿಯೂ ಪ್ರಧಾನಿ ಅಸಮರ್ಥರು, ಆದರೆ ಈ ವೈಫಲ್ಯಕ್ಕೆ ನಿಜವಾದ ಕಾರಣ ಆರ್‌ಎಸ್‌ಎಸ್ ದೇಶದಲ್ಲಿ ಹರಡುತ್ತಿರುವ ದ್ವೇಷ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದ್ದಾರೆ.

ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇರಳಕ್ಕೆ ಎರಡು ದಿನಗಳ ಭೇಟಿ ನೀಡಿರುವ ರಾಹುಲ್ ಗಾಂಧಿ, ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಎಲ್ ಡಿ ಎಫ್ ನ ಅವರ ನೀತಿಗಳು ರಾಜ್ಯಕ್ಕೆ ಹಾನಿಯನ್ನುಂಟುಮಾಡಿದೆ ಎಂದು ಆರೋಪಿಸಿದರು.