ಸನ್ಮಾರ್ಗ ವಾರ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,899 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,07,90,183ಕ್ಕೆ ಏರಿಕೆಯಾಗಿದೆ ಎಂಬುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕೊರೋನಾ ವೈರಸ್ಗೆ 107 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 1,54,703ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟು 1,07,90,183 ಮಂದಿ ಸೋಂಕಿತರ ಪೈಕಿ 1,04,80,455 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 1,55,025 ಸಕ್ರಿಯ ಕೊರೋನ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.