ಸನ್ಮಾರ್ಗ ವಾರ್ತೆ
ಮುಂಬೈ: ಎನ್ಸಿಇಪಿ ಮುಖಂಡ ಶರದ್ ಪವಾರ್ ಅವರು ಐದು ರಾಜ್ಯಗಳ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಅವರ ಪ್ರಕಾರ ಅಸ್ಸಾಂ ಹೊರತುಪಡಿಸಿ ಉಳಿದ ವಿಧಾನಸಭಾ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಬಿಜೆಪಿ ಸಖ್ಯ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.
ಅವರು ಮುಂಬೈಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಪಶ್ಚಿಮ ಬಂಗಾಳ, ತಮಿಳ್ನಾಡು, ಕೇರಳ ರಾಜ್ಯಗಳಲ್ಲಿ ಬಿಜೆಪಿಯೇತರ ಪಾರ್ಟಿ ಮತ್ತು ಅದರ ಮಿತ್ರಪಕ್ಷಗಳು ಸೇರಿ ಅಧಿಕಾರ ಹಿಡಿಯಬಹುದು. ಇದು ದೇಶದ ರಾಜಕೀಯಕ್ಕೆ ಹೊಸ ದಿಕ್ಕು ಕೊಡಬಹುದು ಎಂದು ಮಾಜಿ ಕೇಂದ್ರ ಸಚಿವರೂ, ಎನ್ ಸಿ ಪಿ ಮುಖಂಡರೂ ಆಗಿರುವ ಪವಾರ್ ಹೇಳಿದರು.












