ಪ್ರಧಾನಿ ಮೋದಿಯವರ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ರಾಜೀನಾಮೆ

0
895

ಸನ್ಮಾರ್ಗ ವಾರ್ತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರ ಪ್ರದೀಪ್ ಕುಮಾರ್ ಸಿನ್ಹಾರವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ.

ವೈಯಕ್ತಿಕ ಕಾರಣಗಳನ್ನು ನೀಡಿ ಪಿಕೆ ಸಿನ್ಹಾರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ವರದಿಯಾಗಿದ್ದು, ಸಿನ್ಹಾರವರು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಪ್ರಧಾನಿಯವರ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡಿದ್ದರು. ಪ್ರದೀಪ್ ಕುಮಾರ್ ಸಿನ್ಹಾ 1977ರ ಬ್ಯಾಚ್‌ನ ಉತ್ತರ ಪ್ರದೇಶ ಕೇಡರ್‌ನ ಭಾರತೀಯ ಆಡಳಿತ ಸೇವೆಯ (ಐಎಎಸ್) ಅಧಿಕಾರಿಯಾಗಿದ್ದಾರೆ.