ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ‌ಗೆ ಕೊರೋನಾ ಪಾಸಿಟಿವ್

0
685

ಸನ್ಮಾರ್ಗ ವಾರ್ತೆ

ಮಹಾರಾಷ್ಟ್ರ: ಮಹಾರಾಷ್ಟ್ರದ ಕ್ಯಾಬಿನೆಟ್ ಮಂತ್ರಿ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆಯವರು ಕೋರೋನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ್ದು, ಪಾಸಿಟಿವ್ ಆಗಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ತನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೋರೋನ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸಿದ್ದಾರೆ.

ಕೋವಿಡ್ ನ ರೋಗಲಕ್ಷಣಗಳನ್ನು ಹೊಂದಿದ್ದು, ನಾನು ಪರೀಕ್ಷಿಸಿದ್ದೇನೆ ಮತ್ತು ನಾನು COVID ಪಾಸಿಟಿವ್ ಆಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ತಮ್ಮನ್ನು ತಾವೇ ಪರೀಕ್ಷಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ. ಪ್ರತಿಯೊಬ್ಬರೂ ದಯವಿಟ್ಟು ಕೋವಿಡ್ ನಿಯಮ‌ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ “ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ದೈನಂದಿನ ಕರೋನ ಪಾಸಿಟಿವ್ ವರದಿಗಳಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. ರಾಜ್ಯದಲ್ಲಿ ವೈರಸ್‌ನ ತ್ವರಿತ ಬೆಳವಣಿಗೆಯನ್ನು ತಡೆಯಲು ಲಾಕ್‌ಡೌನ್ ರಾಜ್ಯ ಸರ್ಕಾರದ ಮುಂದಿರುವ ಆಯ್ಕೆಯಾಗಿದೆ ಎಂದು  ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿನ್ನೆ ಹೇಳಿದ್ದರು.

ಮಾರ್ಚ್ 31 ರವರೆಗೆ ಮಹಾರಾಷ್ಟ್ರದ ಎಲ್ಲಾ ಚಿತ್ರಮಂದಿರಗಳು, ಸಭಾಂಗಣಗಳು ಮತ್ತು ಕಚೇರಿಗಳು ಶೇಕಡಾ 50 ರಷ್ಟು ಮಾತ್ರ ತೆರೆದುಕೊಳ್ಳಬೇಕೆಂದು ಎಂದು ಮಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿತ್ತು.