KUWJ ಮನವಿಗೆ ಸ್ಪಂದಿಸಿದ ರಾಜ್ಯ ‌ಸರಕಾರ; ಮೃತ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ನೆರವು

0
426

ಸನ್ಮಾರ್ಗ ವಾರ್ತೆ

ಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪತ್ರಕರ್ತರಾದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವೆಂಕಟೇಶ ದೊರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೆ.ಖಾದರ್‌ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

ವೆಂಕಟೇಶ ದೊರೆ ಕುಟುಂಬಕ್ಕೆ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಕೆ.ಖಾದರ್ ಕುಟುಂಬಕ್ಕೆ ನೆರವು ನೀಡುವಂತೆ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.

ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸುತ್ತದೆ.