ಕೇಂದ್ರ ಸರಕಾರದ ವೈಫಲ್ಯತೆ ಖಂಡಿಸಿ ವೆಲ್ಫೇರ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ

0
721

ಸನ್ಮಾರ್ಗ ವಾರ್ತೆ

ಉಳ್ಳಾಲ: ತೈಲ ಬೆಲೆ ಏರಿಕೆ ‌ಮತ್ತು ಮೋದಿ‌‌ ಸರಕಾರದ ವೈಫಲ್ಯತೆ ಖಂಡಿಸಿ‌ ವೆಲ್ಪೇರ್ ಪಾರ್ಟಿಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತೊಕ್ಕೊಟು‌, ಕುತ್ತಾರ್, ದೇರಳಕಟ್ಟೆ, ಉಳ್ಳಾಲ ಮತ್ತು ತಲಪಾಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೊರೊನಾ ಲಾಕ್‌ಡೌನ್‌ನಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆಲಸವಿಲ್ಲದೇ ನಿತ್ಯ ಜೀವನ ನಡೆಸುವುದಕ್ಕೂ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತ. ಜನ ಜೀವನದ ಜತೆ ಆಟವಾಗುತ್ತಿದೆ ಎಂದು ಟೀಕಿಸಿದರು.

ಅಂತರರಾಷ್ಟ್ರೀಯ ಮಾರು ಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನಸಾಮಾನ್ಯನ ಮೇಲೆ ಹೊರೆ ಹಾಕುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ₹ 100 ಗಡಿ ದಾಟಿದ್ದು, ಇದು ಸರಕು ಸಾಗಾಣಿಕೆ ಮೇಲೆ ಹೊಡೆತ ಬೀಳುತ್ತಿದೆ. ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ ಎಂದು ಆರೋಪಿಸಿದರು.

ಸುಳ್ಳು ಭರವಸೆ ನೀಡಿ ಉದ್ಯೋಗ ಸೃಷ್ಟಿ ಮಾಡದೇ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಸ್ವಾವಲಂಬಿ ಬದುಕಿಗೂ ಕೊಳ್ಳಿ ಇಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿ ದೇಶದ ಜನಕ್ಕೆ ಸಂಕಷ್ಟದಿಂದ ದೂರ ಮಾಡಬೇಕು ಇಲ್ಲವಾದಲ್ಲಿ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಈ ಜನವಿರೋಧಿ ನೀತಿಯ ಸರ್ಕಾರವನ್ನು ವಜಾ ಮಾಡಬೇಕು‌ಎಂದು ಆಗ್ರಹಿಸಿದರು.

ವೆಲ್ಫೇರ್ ಪಾರ್ಟಿ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಹನೀಫ್ ತಲಪಾಡಿ, ಕಾರ್ಯದರ್ಶಿ ಮುಹಮ್ಮದ್ ಸೈಫ್ ಮತ್ತು ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.