ಸನ್ಮಾರ್ಗ ವಾರ್ತೆ
ಬೆಂಗಳೂರು: ಬೆಂಗಳೂರು ಹಾಗೂ ಕಾರವಾರ ನಡುವೆ ಸಂಚರಿಸುವ ರೈಲಿಗೆ(ಗಾಡಿ ಸಂಖ್ಯೆ 16595/16596) ‘ಪಂಚಗಂಗಾ ಎಕ್ಸ್ಪ್ರೆಸ್’ ಎಂದು ನಾಮಕರಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ತಿಳಿಸಿದೆ. ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲಿಗೆ ಪಂಚಗಂಗಾ ಎಕ್ಸ್ಪ್ರೆಸ್ ಎಂಬ ಹೆಸರಿಡುವುದಾಗಿ ತಿಳಿಸಿದೆ. ಅಲ್ಲದೇ, ಈ ಮಾಹಿತಿಯನ್ನು ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ 5 ಪ್ರಮುಖ ನದಿಗಳು ಸಂಗಮಿಸಿ ಸೃಷ್ಠಿಯಾಗುವ ಪಂಚ ಗಂಗಾವಳಿ ನದಿಯ ಹೆಸರನ್ನು ಆಧರಿಸಿ ಪಂಚಗಂಗಾ ಎಕ್ಸ್ಪ್ರೆಸ್ ಎಂಬ ಹೆಸರನ್ನು ಆರಿಸಲಾಗಿದ್ದು, ಬೆಂಗಳೂರು ಹಾಗೂ ಕಾರವಾರ ನಡುವಿನ ನೂತನ ರೈಲು ಈ ಹೆಸರಿನಲ್ಲಿ ಸಂಚರಿಸಲಿದೆ.
ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವಾಲಯ ಪುರಸ್ಕರಿಸಿದೆ. ಇದೀಗ ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ ಪಂಚಗಂಗಾ ಎಕ್ಸ್ಪ್ರೆಸ್ ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು-ಕಾರವಾರ ರೈಲಿಗೆ ನಾಮಕರಣ ಮಾಡಿದ ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವಾಲಯಕ್ಕೆ ಧನ್ಯವಾದ ಅರ್ಪಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕರಾವಳಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಸೇತು ಆಗಿರುವ ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲು ಪ್ರತಿದಿನ ಓಡಾಡಲಿದ್ದು, ಇನ್ನು ಮುಂದೆ ಅದನ್ನು ಪಂಚಗಂಗಾ ಎಕ್ಸ್ಪ್ರೆಸ್ ಎಂದು ಕರೆಯಲಾಗುತ್ತದೆ. ಕಾರವಾರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನ ರೈಲನ್ನು ಸದುಪಯೋಗಪಡಿಸಿಕೊಳ್ಳಬೇಕು. ಕಡಿಮೆ ಪ್ರಯಾಣ ದರ, ಸುಲಭ ಸಂಚಾರದ ಜತೆ ಮೂಲಭೂತ ಸೌಕರ್ಯಗಳು ರೈಲಿನಲ್ಲಿ ಇರುವ ಕಾರಣ ಬೆಂಗಳೂರಿಗೆ ಓಡಾಡುವ ಜನರು ಇದನ್ನು ಬಳಸಿ ಎಂದು ಶೋಭಾ ಕರಂದ್ಲಾಜೆ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
Karwar-Bangalore express will be called as "PANCHAGANGA EXPRESS"!
Panchagangavali- a geographical wonder of coastal Karnataka, where 5 holy rivers of Udupi merge & form Panchagangavali before joining Arabian Sea.
Thank you @RailMinIndia for real tributes to our life lines! pic.twitter.com/sXyEmGqmRs
— Shobha Karandlaje (@ShobhaBJP) July 2, 2021












