ಸನ್ಮಾರ್ಗ ವಾರ್ತೆ
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಅರ್ಬಾಜ್ ಮುಲ್ಲಾ ಹತ್ಯೆಯ ಬಗ್ಗೆ ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯ ಅಧ್ಯಕ್ಷ ತಾಹಿರ್ ಹುಸೇನ್ ಖಂಡಿಸಿದ್ದು, ಸರಕಾರ ಶೀಘ್ರವೇ ಅಪರಾಧಿಗಳನ್ನು ಬಂಧಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಹೆಣ್ಣಿನ ಕಡೆಯವರು ಅರ್ಬಾಜ್ನನ್ನು ಹತ್ಯೆ ನಡೆಸಿದ್ದಾರೆ ಎಂದು ಕುಟುಂಬಿಕರು ಆರೋಪಿಸಿದ್ದಾರೆ.
ಬೆಳಗಾವಿಯ ಕನ್ನಡ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ತಾಹಿರ್ ಹುಸೇನ್ ಮಾತಾಡಿದ್ದು ಅರ್ಬಾಜ್ ಹತ್ಯೆಯ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ ಮತ್ತು ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.












