ಸನ್ಮಾರ್ಗ ವಾರ್ತೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಜೀವನಕ್ಕೆ 20 ವರ್ಷಗಳು ತುಂಬಿವೆ. 13 ವರ್ಷ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು 7 ವರ್ಷ ದೇಶದ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಥದ್ದೊಂದು ಸಾಧನೆಯನ್ನು ತಾನು ನಿರೀಕ್ಷಿಸಿರಲಿಲ್ಲ ಎಂದು ಅವರು ಉತ್ತರಾಖಂಡದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಹೇಳಿಕೊಂಡರು.
ಮುಖ್ಯಮಂತ್ರಿ ಪದವಿಯಿಂದ ಪ್ರಧಾನಮಂತ್ರಿ ಪದವಿಗೆ ತಾನು ತಲುಪುವೆ ಎಂಬುದನ್ನು ಎಂದೂ ನಿರೀಕ್ಷಿಸಿರಲಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಇದೇ ದಿನ ಓರ್ವ ಸಾಮಾಜಿಕ ಕಾರ್ಯಕರ್ತನೆಂಬ ನೆಲೆಯಲ್ಲಿ ಅಧಿಕೃತವಾಗಿ ನನಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿತು. ಜನರ ನಡುವೆ ಜನರಿಗಾಗಿ ಬದುಕುವ ನನ್ನ ಯಾತ್ರೆ ಅಂದಿನಿಂದ ಆರಂಭವಾಯಿತು ಎಂದು ಅವರು ಹೇಳಿದರು.
2001ರ ಅಕ್ಟೋಬರ್ 7ರಂದು ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.












