ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

0
693

ಸನ್ಮಾರ್ಗ ವಾರ್ತೆ

ಅರೇಹಳ್ಳಿ: ಅರೆಹಳ್ಳಿಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಅರೇಹಳ್ಳಿ, ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಅರೇಹಳ್ಳಿ ಮತ್ತು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಅರೇಹಳ್ಳಿಯ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ, ಬೆಲೆ ಏರಿಕೆ ವಿರುದ್ಧ, ಅಸ್ಸಾಂ ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆಯ ವಿರುದ್ಧ ಮತ್ತು ಯು.ಪಿ ರಾಜ್ಯದಲ್ಲಿ ಕೃಷಿಕರ ಮಾರಣಹೋಮ ಮಾಡಿದ ಆಷಿಶ್ ಮಿಶ್ರ ಹಾಗೂ ಅಲ್ಲಿನ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

ಎಲ್ಲಾ ಸಂಘಟನೆಯ ಅಧ್ಯಕ್ಷರು ಮಾತನಾಡಿ ಸರ್ಕಾರ ನಮ್ಮ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರರ ಮುಖಾಂತರ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಅರೇಹಳ್ಳಿಯ ಅಧ್ಯಕ್ಷರಾದ ಮುಜೀಬುರ್ ರಹಮಾನ್ ಮತ್ತು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಅರೇಹಳ್ಳಿಯ ಅಧ್ಯಕ್ಷರಾದ ಅಬ್ದುಲ್ ಹಸೀಬ್ ಫೈಝ್ ಜನರನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಐ.ಓ ಅರೇಹಳ್ಳಿಯ ಅಧ್ಯಕ್ಷರಾದ ಝಹೇರ್ ಅಬ್ದುಲ್ಲಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.