ಸನ್ಮಾರ್ಗ ವಾರ್ತೆ
ರಾಮನಗರ: ಹಲವು ವರ್ಷಗಳಿಂದ ರಸ್ತೆಯ ಅಧೋಗತಿಯಿಂದ ರೋಸಿಹೋದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಾದರಹಳ್ಳಿ ಗ್ರಾಮದ ಜನರು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದ ರಸ್ತೆಗಳಲ್ಲಿ ಪೈರು ನಾಟಿ ಮಾಡಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಗ್ರಾಮಸ್ಥ ಎಸ್.ಪಿ ಬಾಲಸುಬ್ರಮಣ್ಯ, ಈ ಗ್ರಾಮದಲ್ಲಿ ಸುಮಾರು 250 ಮನೆಗಳಿದ್ದು, ಕಳೆದ ಮೂರು ವರ್ಷದಿಂದ ಗ್ರಾಮದಲ್ಲಿ ಇಂತಹುದೇ ಪರಿಸ್ಥಿತಿ ಇದೆ. ಮಳೆ ಬಂದರೆ ಸಾಕು ಮನೆಯಿಂದ ಹೊರಕ್ಕೆ ಕಾಲಿಡೋಕೆ ಆಗಲ್ಲ. ಸುತ್ತಾಡೋಕೆ ಆಗಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಶಾಸಕರುಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರು ಸರಕಾರ ಎಚ್ಚೆತ್ತುಕೊಂಡು ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಅವರು ಹೇಳಿದರು.












