ಮುಸ್ಲಿಮರ ನರಮೇಧಕ್ಕೆ ಬಹಿರಂಗ ಕರೆ: ಸರಕಾರದ ಮೌನವನ್ನು ಖಂಡಿಸಿದ ಜಮೀಯತ್ ಉಲಮಾ-ಏ-ಹಿಂದ್

0
271

ಸನ್ಮಾರ್ಗ ವಾರ್ತೆ

ನವದೆಹಲಿ: ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಮುಸ್ಲಿಮರ ನರಮೇಧಕ್ಕೆ ಬಹಿರಂಗ ಕರೆ ನೀಡಿದವರ ವಿರುದ್ಧ ಸರ್ಕಾರದ ಮೌನ ನಡೆ ಖಂಡನೀಯ ಎಂದು ಜಮೀಯತ್ ಉಲಮಾ-ಏ-ಹಿಂದ್ ನ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸೇರಿದಂತೆ ವಿವಿಧ ಪ್ರಾಧಿಕಾರಗಳಿಗೆ ಅವರು ಪತ್ರ ಬರೆದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ಈ ವಿಚಾರದಲ್ಲಿ ಸರಕಾರ ಮೌನ ವಹಿಸಿರುವುದು ದೇಶಕ್ಕೆ ಅತ್ಯಂತ ಹಾನಿಕಾರಕವಾಗಿದೆ. ಶಾಂತಿ ಮತ್ತು ಕೋಮು ಸೌಹಾರ್ದತೆಗೆ ದೊಡ್ಡ ಬೆದರಿಕೆಯ ಕರೆ ಗಂಟೆಯಾಗಿದೆ. ಆದ್ದರಿಂದ, ಪ್ರಚೋದನಕಾರಿ ಮತ್ತು ದ್ವೇಷದ ಭಾಷಣಗಳನ್ನು ಮಾಡಿದ ಮತ್ತು ಮುಸ್ಲಿಮರ ಹತ್ಯಾಕಾಂಡಕ್ಕೆ ಬಹಿರಂಗವಾಗಿ ಕರೆ ನೀಡಿದ ಮತ್ತು ಇಡೀ ಹಿಂದೂ ಸಮುದಾಯವನ್ನು ಶಸ್ತ್ರಸಜ್ಜಿತಗೊಳಿಸಲು ಒತ್ತಾಯಿಸಿದ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಮದನಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.