ಸನ್ಮಾರ್ಗ ವಾರ್ತೆ
ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ರಿಗೆ ಕೊರೋನ ದೃಢಪಟ್ಟಿದೆ. ಇಂದು ಬೆಳಗ್ಗೆ ಕೇಜ್ರಿವಾಲ್ ಈ ವಿವರವನ್ನು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಮನೆಯಲ್ಲಿ ಕ್ವಾರಂಟೈನ್ ಮಾಡಿಕೊಂಡಿದ್ದೇನೆ ಎಂದು ತಿಳಿಸಿರುವ ಅವರು, ತುಂಬ ಸಣ್ಣ ಪ್ರಮಾಣದ ಲಕ್ಷಣಗಳಿವೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ತನ್ನ ಸಂಪರ್ಕದಲ್ಲಿದ್ದವರು ಕೊರೋನಾ ಇದೆಯಾ ಎಂದು ಪರೀಕ್ಷೆ ಮಾಡಿ, ಪಾಸಿಟಿವ್ ಬಂದರೆ ಕ್ವಾರಂಟೈನ್ ನಲ್ಲಿರಿ ಎಂದು ಸಲಹೆ ನೀಡಿದ್ದಾರೆ.
ಪಂಜಾಬ್, ಉತ್ತರಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಎರಡು ರಾಜ್ಯಗಳಲ್ಲಿ ಅವರು ಪ್ರಚಾರಕ್ಕೆ ಹೋಗಿದ್ದರು.
ಒಮಿಕ್ರಾನ್ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಮುನ್ನೆಚ್ಚರಿಕೆಯನ್ನು ತೀವ್ರಗೊಳಿಸಿದೆ. ದಿನಾಲೂ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 4099 ಮಂದಿಗೆ ಕೊರೊನ ದೃಢಪಟ್ಟಿದೆ.












