ಸನ್ಮಾರ್ಗ ವಾರ್ತೆ
ದಕ್ಷಿಣ ಕನ್ನಡ: ಕ್ರೈಂ ಡ್ಯೂಟಿಗೆ ಹೋಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸಂತೋಷ್(36) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಮಿನಲ್ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್ಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಸೊರಬ ಮೂಲದ ಸಂತೋಷ್ ಮಂಗಳೂರಿನಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಮೂಡಬಿದ್ರೆ ಪೊಲೀಸ್ ಸ್ಟೇಷನ್ ನಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
Youngest member of the police family to succumb to Heart attack. Santhosh HC – 435 attached to Moodabidre Police Station has breathed his last. May his soul rest in peace. pic.twitter.com/lc6o4fWyMb
— N. Shashi Kumar CP Mangaluru City (@compolmlr) January 5, 2022












