ಸನ್ಮಾರ್ಗ ವಾರ್ತೆ
ವಿಟ್ಲ: ಕಾರ್ಮಿಕ ಸಂಘಟನೆ ಫೆಡರೇಷನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(FITU) ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಕೃಷಿಕ ಮಹಾಲಿಂಗ ನಾಯ್ಕರನ್ನು ಸನ್ಮಾನಿಸಲಾಯಿತು. FITU ರಾಜ್ಯಾಧ್ಯಕ್ಷ ಸುಲೈಮಾನ್ ಕಲ್ಲರ್ಪೆ ನೇತೃತ್ವದ ನಿಯೋಗವು ಅವರ ಮನೆಗೆ ಭೇಟಿ ನೀಡಿ ಗೌರವಿಸಿ ಕಾಣಿಕೆ ನೀಡಿ ಶಾಲು ಹೊದಿಸಿ ಸನ್ಮಾನಿಸಿದೆ.
ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವಿಟ್ಲ ಘಟಕದ ಕಾರ್ಯದರ್ಶಿ ಅಬ್ದುಲ್ಲ ಕುಂಞ, ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಎ.ಕೆ.ಕುಕ್ಕಾಜೆ ಮತ್ತು ವೆಲ್ಫೇರ್ ಪಕ್ಷದ ಪುತ್ತೂರು ವಲಯ ಕಾರ್ಯದರ್ಶಿ ಇಸ್ಹಾಕ್ ನೀರ್ಕಜೆ ನಿಯೋಗದಲ್ಲಿ ಉಪಸ್ಥಿತರಿದ್ದರು.













