ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ

0
796

ಸನ್ಮಾರ್ಗ ವಾರ್ತೆ

ಬಾಗಲಕೋಟೆ: ಕನ್ನಡದ ಕಬೀರ ಎಂದೇ ಗುರುತಿಸಿಕೊಂಡಿದ್ದ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಅವರು ನಿಧನರಾದರು ಎಂಬುದಾಗಿ ವರದಿಯಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ  ಇಬ್ರಾಹಿಂ ಸುತಾರ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಸುತಾರ ಅವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಇಬ್ರಾಹಿಂ ಸುತಾರ್‌ರವರು ನಾಡಿನೆಲ್ಲೆಡೆ ಪ್ರವಚನಗಳ ಮೂಲಕ ಭಾವೈಕ್ಯತೆ ಸಂದೇಶ ಸಾರುವಲ್ಲಿ ಹೆಸರು ವಾಸಿಯಾಗಿದ್ದರು. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರವಚನಕಾರರಾಗಿ, ಸೂಫಿ ಸಂತರೆಂದೇ ಅವರ ಪ್ರಸಿದ್ಧರು ಕೂಡ ಆಗಿದ್ದರು.