ಸನ್ಮಾರ್ಗ ವಾರ್ತೆ
ಹೊಸದಿಲ್ಲಿ: ಗೋವಾ, ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು ಉತ್ತರಪ್ರದೇಶದ 55 ವಿಧಾನಸಭೆಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. ಗೋವಾ ಉತ್ತರಾಖಂಡದಲ್ಲಿ ಒಂದೇ ಚರಣದಲ್ಲಿ ಮತದಾನ ನಡೆಯಲಿದೆ.
ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿವೆ. ಇಲ್ಲಿ 301 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಪ್ರಸ್ತುತ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆಗಿದ್ದಾರೆ.
ಇದೇ ವೇಳೆ ಗೋವಾದಲ್ಲಿ ಆಮ್ ಆದ್ಮಿ ಪಾರ್ಟಿ ಚೇತರಿಸುವುದೋ ಎಂದು ನೋಡಬೇಕಾಗಿದೆ. ಭ್ರಷ್ಟಾಚಾರ ರಹಿತ ಸರಕಾರದ ವಾದವನ್ನು ಅದು ಮುಂದಿಟ್ಟಿದೆ. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವ್ಯಕ್ತಪಡಿಸಿದರು.
ಉತ್ತರಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಪ್ರಸ್ತುತ ಎರಡನೇ ಹಂತದ ಮತದಾನ ಆರಂಭವಾಗಿದೆ. 55 ಸೀಟುಗಳಿಗೆ ಮತದಾನ ನಡೆಯಲಿದೆ. ಈ ತಿಂಗಳು, 20, 23 27, ಮಾರ್ಚ್ 3, ಏಳಕ್ಕೂ ಇಲ್ಲಿ ಮತದಾನ ನಡೆಯಲಿದೆ.
ಉತ್ತರಾಖಂಡದಲ್ಲಿ ಬಿಜೆಪಿ ಸರಕಾರ ಇದೆ. ಪುಷ್ಕರ್ ಸಿಂಗ್ ಧಾಮಿ ಮುಖ್ಯಮಂತ್ರಿಯಾಗಿದ್ದು, ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಸ್ಪರ್ಧಾ ಕಣದಲ್ಲಿದ್ದಾರೆ. ಇಲ್ಲಿ 72 ಸೀಟುಗಳಿಗೆ 632 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.












