ಸನ್ಮಾರ್ಗ ವಾರ್ತೆ
ಲಕ್ಕೋ: ಉತ್ತರ ಪ್ರದೇಶದಲ್ಲಿರುವ ಮದರಸಾಗಳಲ್ಲಿ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿರುವುದಾಗಿ ಮದರಸಾ ಶಿಕ್ಷಣ ಮಂಡಳಿಯು ತಿಳಿಸಿದೆ.
2017ರಲ್ಲಿ ಶಿಕ್ಷಣ ಮಂಡಳಿಯು ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ ನಂತರ ಈ ನಿರ್ಧಾರ ಕೈಗೊಂಡಿದ್ದು ಬೆಳಿಗ್ಗೆ ಪ್ರಾರ್ಥನಾಗೀತೆಯ ಬಳಿಕ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಬೇಕೆಂದು ಆದೇಶಿಸಲಾಗಿದೆ.
ಇದೇ ವೇಳೆ ಹಾಜರಾತಿ ಮತ್ತು ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಹಲವಾರು ಇತರ ನಿರ್ಧಾರಗಳನ್ನು ಶಿಕ್ಷಣ ಮಂಡಳಿಯು ಅಧ್ಯಕ್ಷ ಇಫ್ತಿಕಾರ್ ಅಹ್ಮದ್ ಜಾವೇದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದೆ. ಮದ್ರಸಾ ಶಿಕ್ಷಕರಾಗಲು (ಟಿಇಟಿ) ಪರೀಕ್ಷೆ ಬರೆದು ಅರ್ಹತೆ ಪಡೆದಿರಬೇಕು ಎಂದು ಸೂಚಿಸಲಾಗಿದೆ.












