ಸನ್ಮಾರ್ಗ ವಾರ್ತೆ
ಸಾಂಬಾ: ಪಂಚಾಯತ್ ರಾಜ್ ದಿನಾಚರಣೆಯ ಭಾಗವಾಗಿ ಜಮ್ಮು-ಕಾಶ್ಮೀರದಲ್ಲಿ 20,000 ಕೋಟಿ ರೂ. ವೆಚ್ಚದ ಸಂಪರ್ಕ ಮತ್ತು ವಿದ್ಯುತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ನಲ್ಲಿ ಯೋಜನೆಯ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಈ ವರ್ಷದ ಪಂಚಾಯತ್ ರಾಜ್ ದಿನವನ್ನು ಜಮ್ಮು-ಕಾಶ್ಮೀರದಲ್ಲಿ ಆಚರಿಸಲಾಗುತ್ತಿರುವುದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ’ ಎಂದು ಅವರು ಹೇಳಿದರು. 370ನೇ ವಿಧಿ ರದ್ದುಗೊಳಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಕಾಶ್ಮೀರಕ್ಕೆ ನೀಡಿದ ಮೊದಲ ಭೇಟಿಯಿದು.
“ಈ ಯೋಜನೆಗಳು ಜಮ್ಮು-ಕಾಶ್ಮೀರದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಕಳೆದ 2-3 ವರ್ಷಗಳಲ್ಲಿ ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ಹೊಸ ಆಯಾಮಗಳನ್ನು ರಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Panchayati Raj institutions strengthen the spirit of democracy. Addressing Gram Sabhas across the country from Jammu & Kashmir. https://t.co/dMWlbBU92x
— Narendra Modi (@narendramodi) April 24, 2022
Jammu & Kashmir | PM Narendra Modi technology exhibition at Palli Village in Samba district on the occasion of National Panchayati Raj Day. pic.twitter.com/KZ5FkcUqP1
— ANI (@ANI) April 24, 2022












