ಹಿರಿಯ ಸಾಹಿತಿ ಯು.ಎ ಖಾಸಿಮ್ ಉಳ್ಳಾಲ ನಿಧನ

0
424

ಸನ್ಮಾರ್ಗ ವಾರ್ತೆ

ಮಂಗಳೂರು: ಹಿರಿಯ ಸಾಹಿತಿ ಯುಎ ಖಾಸಿಮ್ ಉಳ್ಳಾಲ (74) ಇಂದು ಮುಂಜಾನೆ ನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ.
ಬ್ಯಾರಿ ಅಂದೋಲನದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಅವರು, ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯರಾಗಿ, ಕೇಂದ್ರ ಬ್ಯಾರಿ ಪರಿಷತ್ ಮತ್ತು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಪದಾಧಿಕಾರಿಯಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ತೊಕ್ಕೊಟ್ಟು ಸಮೀಪದ ಕಲ್ಲಾಪು ಪಟ್ಲದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.