ವಿಪರೀತ ಮಳೆ: ಆಗಸ್ಟ್ 4ರಂದು ಸುಳ್ಯ ತಾಲೂಕಿನ ಹೈಸ್ಕೂಲ್‌ಗಳಿಗೆ ರಜೆ ಘೋಷಣೆ

0
358

ಸನ್ಮಾರ್ಗ ವಾರ್ತೆ

ಮಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್ ಗೆ ಆಗಸ್ಟ್ 4 ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ತಿಳಿಸಿದ್ದಾರೆ.

ಹಾಗೆಯೇ ಕಡಬ ತಾಲೂಕು ಸೇರಿದಂತೆ ಇತರ ತಾಲೂಕುಗಳಲ್ಲಿ ಪರಿಸ್ಥಿತಿ ನೋಡಿ ಬಿಇಓ ಅಥವಾ ತಹಶೀಲ್ದಾರ್ ಅವರು ರಜೆ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.