“ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ” : ಮೆಹಬೂಬಾ ಮುಫ್ತಿ ಟ್ವೀಟ್

0
497

ಸನ್ಮಾರ್ಗ ವಾರ್ತೆ

ಶ್ರೀನಗರ: ಭಯೋತ್ಪಾದಕರಿಂದ ಹತ್ಯೆಗೀಡಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ಭೇಟಿ ಮಾಡುವುದನ್ನು ತಡೆಯಲು ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಗುಷ್ಕರ್ ಪ್ರದೇಶದಲ್ಲಿ ಮನೆಯ ಬೀಗ ಹಾಕಿದ ಗೇಟ್ ಮತ್ತು ಅದರ ಹೊರಗೆ ನಿಲ್ಲಿಸಿರುವ ಸಿಆರ್‌ಪಿಎಫ್ ವಾಹನಗಳ ಚಿತ್ರಗಳನ್ನು ಮೆಹಬೂಬಾ ಮುಫ್ತಿ ಟ್ವಿಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಕಠೋರ ನೀತಿಗಳೇ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿವೆ. ನಮ್ಮ ನೋವನ್ನು ಮರೆಮಾಚಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.