ಸನ್ಮಾರ್ಗ ವಾರ್ತೆ
ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಂಡಿದ್ದ ಕೃಷ್ಣರಾಜಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಚ್.ಎಲ್.ನಂದೀಶ್ ಹೃದಯಘಾತದಿಂದ ನಿಧನರಾಗಿದ್ದು, ಇದೀಗ ನಂದೀಶ್ ಸಾವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಚಿವ ಎಂಬಿಟಿ ನಾಗರಾಜ್ ಪೋಸ್ಟಿಂಗ್ಗೆ 60-70 ಲಕ್ಷ ರೂ. ಕೊಟ್ಟು ಬಂದ್ರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಎಂದು ಹೇಳಿರುವುದು ಭಾರೀ ಚರ್ಚೆ ಕಾರಣವಾಗಿದೆ.
ಇನ್ಸ್ಪೆಕ್ಟರ್ ಎಚ್.ಎಲ್.ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿರುವುದು ಭ್ರಷ್ಟಾಚಾರದಿಂದಾಗಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಇನ್ಸ್ಪೆಕ್ಟರ್ ಹುದ್ದೆ ಪಡೆದುಕೊಳ್ಳಲು ಅಥವಾ ನಿಗದಿತ ಸ್ಥಳಕ್ಕೆ ವರ್ಗಾವಾಗಲು ಲಕ್ಷಾಂತರ ಹಣ ಲಂಚ ನೀಡಬೇಕಾಗುತ್ತದೆ ಎಂಬ ವಿಚಾರ ಮತ್ತೆ ಬಹಿರಂಗಗೊಂಡಿದೆ. ಎಚ್.ಎಲ್.ನಂದೀಶ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಬಂದಿದ್ದ ಸಚಿವ ಎಂಟಿಬಿ ನಾಗರಾಜ್ ಹೇಳಿದ ಮಾತುಗಳು ಸಾಕಷ್ಟು ವೈರಲ್ ಆಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ‘ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ. ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. ನಾಗರಾಜ್ ಅವರ ಹೇಳಿಕೆಯು ಈ ಸರ್ಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ’ ಎಂದು ತಿಳಿಸಿದ್ದಾರೆ.
ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ.
ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಶ್ರೀ @BSBommai ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ.1/7#CashForPosting pic.twitter.com/mXqghB6cHz
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ..3/7#CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022












