ದೆಹಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಮೃತ

0
389

ಸನ್ಮಾರ್ಗ ವಾರ್ತೆ

ನವದೆಹಲಿ: ದೆಹಲಿಯ ನರೇಲಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ 9:35ರ ಸುಮಾರು ಅಗ್ನಿ ಅವಘಡ ಸಂಭವಿಸಿದ್ದು, 2 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದಿಂದ 20 ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಿಸುತ್ತಿವೆ.

ಕಾರ್ಖಾನೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಂಡಾಗ ಅಲ್ಲಿ 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಏಣಿಗಳನ್ನು ಇರಿಸಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಇನ್ನೂ ಹಲವರು ಒಳಗೆ ಸಿಲುಕಿಕೊಂಡಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕಟ್ಟಡದ ಎರಡನೇ ಮಹಡಿಯಲ್ಲಿರುವ ಚಪ್ಪಲಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಪ ಪೊಲೀಸ್ ಆಯುಕ್ತ (ಹೊರ-ಉತ್ತರ) ದೇವೇಶ್ ಕುಮಾರ್ ಮಹ್ಲಾ ತಿಳಿಸಿದ್ದಾರೆ. “30 ರಿಂದ 35 ವರ್ಷದೊಳಗಿನ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲರೂ ಸ್ಥಿರವಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ಗುರುತಿಸಲು ಪ್ರಯತ್ನ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.