ವೈದ್ಯರ ಮೇಲೆ ಕ್ರಿಮಿನಲ್ ಕೇಸ್‌’ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

0
266

ಸನ್ಮಾರ್ಗ ವಾರ್ತೆ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿ ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಚಾಮರಾಜನಗರ, ಯಾದಗಿರಿ, ತುಮಕೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಮಾನವೀಯತೆ, ದಯೆ, ಕರುಣೆ, ಸೌಹಾರ್ದತೆ ಮಾಯವಾಗುತ್ತಿದೆ. ವೈದ್ಯರ ದುಡ್ಡಿನ ದಾಹ ತೀರಿಸಲಾಗದೇ ಬಡವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ನಿರ್ದಯಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ರಾಜ್ಯದಲ್ಲಿ ಮುಂದೆ ಇಂತಹ ದುರ್ಘಟನೆಗಳು ನಡೆಯದಂತೆ ಸೂಕ್ತ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.