ಸನ್ಮಾರ್ಗ ವಾರ್ತೆ
ಮುಂಬೈ: ಮಹಾರಾಷ್ಟ್ರದ ಮಹಾವಿಕಾಸ್ ಅಗಾಡಿ ಮೈತ್ರಿಕೂಟದ ನಾಯಕರನ್ನು ಕೇಂದ್ರ ತನಿಖಾ ಸಂಸ್ಥೆಗಳು ಬೇಟೆಯಾಡುತ್ತಿರುವ ಬಗ್ಗೆ ಎನ್‌ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕರ ಬಂಧನವು ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳ ದುರ್ಬಳಕೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಅವರು ಹೇಳಿದ್ದು, ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ಮತ್ತು ಶಿವಸೇನೆಯ ಸಂಜಯ್ ರಾವತ್ ಬಂಧನವನ್ನು ಮುಂದಿಟ್ಟು ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಅನಿಲ್ ದೇಶ್‍ಮುಖ್‍ರಿಗೆ ಜಾಮೀನು ಲಭಿಸಿದ ಬೆನ್ನಲ್ಲೇ, ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿ ಮಾಡುವುದಾಗಿ ಪವಾರ್ ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಂಜಯ್ ರಾವತ್‌ರಿಗೆ ಕಳೆದ ನವೆಂಬರ್‌ನಲ್ಲಿ ಜಾಮೀನು ಲಭಿಸಿತ್ತು.












