“ಸಿದ್ದು ನಿಜ ಕನಸುಗಳು” ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ

0
419

ಸನ್ಮಾರ್ಗ ವಾರ್ತೆ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿ ರಚಿಸಲಾದ “ಸಿದ್ದು ನಿಜ ಕನಸುಗಳು” ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಸಿದ್ದರಾಮಯ್ಯರ ಪುತ್ರ ಯತೀಂದ್ರ ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು. ಮುಂದಿನ ವಿಚಾರಣೆ ಫೆ.9ಕ್ಕೆ ನಡೆಯಲಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಪುಸ್ತಕ ಬಿಡುಗಡೆಯನ್ನು ಡಾ.ಸಿ.ಎನ್.ಅಶ್ವತ್ಥ ನಾರಾಯಣ ನೆರವೇರಿಸಲಿದ್ದರು.

ಈ ಬಗ್ಗೆ ಸಿದ್ದರಾಮಯ್ಯರ ಪುತ್ರ ಯತೀಂದ್ರ ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್ ಕೋರ್ಟ್ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.